
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ, ರಾಜಶ್ರೀ (28) ಎಂಬ ತಾಯಿ ತನ್ನ ಮೂವರು ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷ್ (1) ರೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಶಂಕ್ರಪ್ಪ ಊರಿನಲ್ಲಿ ಇಲ್ಲದ ವೇಳೆ ಈ ದುರಂತ ನಿನ್ನೆ ಸಂಜೆ ನಡೆದಿದೆ. ಮೊದಲು ಮಕ್ಕಳನ್ನು ಬಾವಿಗೆ ತಳ್ಳಿದ ತಾಯಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಗ್ರಾಮವನ್ನು ಶೋಕದಲ್ಲಿ ಮುಳುಗಿಸಿದೆ.




Space for Advertisement